ಭರತನಾಟ್ಯ ಪ್ರದರ್ಶನ : ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ
By City Today News (City today.media) on August 2, 2024
ಭರತನಾಟ್ಯ ಪ್ರದರ್ಶನ : ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 1, ಗುರುವಾರ ಬೆಳಗ್ಗೆ ಪೂಜಾ ಕಾರ್ಯಕ್ರಮಗಳು, ಅನ್ನದಾನ ಸೇವೆ ಜರುಗಿದವು. ಸಂಜೆಯ ಕಾರ್ಯಕ್ರಮದಲ್ಲಿ ಅಷ್ಟಾವಧಾನ, ರಥೋತ್ಸವ, ಗಜವಾಹನೋತ್ಸವ, ತೊಟ್ಟಿಲು ಸೇವೆಗಳು ನಡೆದವು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ - ಮಂಜು ಭೈರವಿ ನಿರ್ದೇಶನದಲ್ಲಿ "ನಾಟ್ಯ ಭೈರವಿ" ಕಲಾ ಕುಟೀರದ ವಿದ್ಯಾರ್ಥಿ ಗಳಿಂದ "ಭರತನಾಟ್ಯ" ಪ್ರದರ್ಶನ ಕಾರ್ಯಕ್ರಮ ಬಹಳ ವಿಶೇಷವಾಗಿ ನೆರವೇರಿತು ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದರು ,ಈ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗವಹಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
No comments:
Post a Comment